Forrest news Norway Village , Belur , Hassan

Thanks! Share it with your friends!

You disliked this video. Thanks for the feedback!

Added by MiAmigo
73 Views
ಬೇಲೂರು : ಮಲೆನಾಡಿನಲ್ಲಿ ಕಾಡಾನೆಗಳ ಉಪಟಳದಿಂದ ರಾಜೀವ್ ಗಾಂಧಿ ಸೇವಾ ಕೇಂದ್ರ, ನಾರ್ವೇಪೇಟೆ ಗಾ ಬೇಸತ್ತಿರುವ ಗ್ರಾಮಸ್ಥರು ಇಂದು ಆನೆ ಓಡಿಸಲು ಬಂದಂತಹ ಅರಣ್ಯಾಧಿಕಾರಿಗಳು ಮತ್ತು ಗ್ರಾಮ ಪಂಚಾಯ್ತಿ ಪಿಡಿಓಗಳನ್ನು ಗ್ರಾಪಂನಲ್ಲಿ ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿರುವ ಘಟನೆ ಬೇಲೂರು ತಾಲ್ಲೂಕಿನ ನಾರ್ವೆಪೇಟೆಯಲ್ಲಿ ನಡೆದಿದೆ.

ಬೇಲೂರು, ಸಕಲೇಶಪುರ, ಆಲೂರು ಭಾಗದಲ್ಲಿ ಪ್ರತಿನಿತ್ಯ ಕಾಡಾನೆಗಳ ಸಮಸ್ಯೆಯಿಂದ ರೋಸಿ ಹೋಗಿರುವ ಗ್ರಾಮದವರು ಅನಿವಾರವಾಗಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯನ್ನು ನೀಡುತ್ತಿದ್ದಾರೆ.

ಕಳೆದ ಮೂರಾಲ್ಕು ದಶಕಗಳಿಂದ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಕೂಡ ಇದುವರೆಗೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರ ಪ್ರತಿನಿತ್ಯ ಬೆಳೆ ಹಾನಿ ಮತ್ತು ಸಾವು ನೋವುಗಳು ಸಂಭವಿಸುತ್ತಿದ್ದರೂ ಕೂಡ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇಂದು ಬೆಳಗ್ಗೆ ಗ್ರಾಮದ ನೂರಾರು ಜನರು

ನಾರ್ವೆ ಪೇಟೆ ಗ್ರಾಪಂಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಕಾಡಾನೆಗಳನ್ನು ಇಲ್ಲಿಂದ ಸ್ಥಳಾಂತರಿಸಬೇಕು. ನಮಗಾಗಿರುವ ಬೆಳೆನಷ್ಟಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕು. ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಆಗಮಿಸಬೇಕು. ನಮಗೆ ಶಾಶ್ವತ ಪರಿಹಾರ ಮಾಡಿಕೊಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಇನ್ನೂ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
Category
NORWEGIAN NEWS
Commenting disabled.